ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1558 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ.
ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು, ಇಲಾಖೆಗಳು, ಕಚೇರಿಗಳಲ್ಲಿ ಖಾಲಿ ಇರುವ ತಾಂತ್ರಿಕೇತರ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಮತ್ತು ಹವಾಲ್ದಾರ್ ಹುದ್ದೆಗಳಿಗೆ (ಸಿಬಿಐಸಿ ಮತ್ತು ಸಿಬಿಎನ್) ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಟ 18 ರಿಂದ ಗರಿಷ್ಟ ವಯೋಮಿತಿ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಜೂನ್ 30,2023 ರಿಂದ ಜುಲೈ 21,2023ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿರುತ್ತದೆ.