JOB| ಎಸ್‌ಎಸ್‌ಸಿ ನೇಮಕಾತಿ: 307 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಿಬ್ಬಂದಿ ನೇಮಕಾತಿ ಆಯೋಗವು 307 ಕಿರಿಯ ಹಿಂದಿ ಭಾಷಾಂತರಕಾರ, ಕಿರಿಯ ಭಾಷಾಂತರಕಾರ, ಹಿರಿಯ ಭಾಷಾಂತರಕಾರ ಮತ್ತು ಹಿರಿಯ ಹಿಂದಿ ಭಾಷಾಂತರಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ಆಗಸ್ಟ್‌ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 12,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!