JOB| ಎಸ್‌ಎಸ್‌ಸಿ ನೇಮಕಾತಿ: 75,768 ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿಬ್ಬಂದಿ ನೇಮಕಾತಿ ಆಯೋಗವು 75.768 ಕಾನ್‌ಸ್ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.

ಈ ನೇಮಕಾತಿ ಕುರಿತಾಗಿ ನವೆಂಬರ್‌ 24ರಂದು ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಆಸಕ್ತರು ಡಿಸೆಂಬರ್‌ 28,2023ರೊಳಗೆ ಅರ್ಜಿ ಸಲ್ಲಿಸಬಹುದು.

10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಆಗಸ್ಟ್‌ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿವಿಧ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 28,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!