ಮೋದಿ ಉದ್ಯೋಗ ಬದ್ಧತೆ- 70 ಸಾವಿರ ಹುದ್ದೆ ತುಂಬಲು ಸಿದ್ಧವಾಗಿದೆ ಎಸ್‌ಎಸ್‌ಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 70,000 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸುವುದಾಗಿ ಸಿಬ್ಬಂದಿ ನೇಮಕಾತಿ ಆಯೋಗವು(SSC) ನೋಟಿಸ್‌ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಒಂದೂವರೆ ವರ್ಷಗಳಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ʻಮಿಷನ್ ಮೋಡ್‌ʼನಲ್ಲಿ ಹತ್ತು ಲಕ್ಷ ಉದ್ಯೋಗಿಗಳ ನೇಮಕಾತಿ ಮಾಡಲು ನಿರ್ದೇಶನ ನೀಡಿದ್ದರು.

ಸೂಚನೆ ಬೆನ್ನಲ್ಲೇ ಕಮಿಷನ್‌ ತ್ವರಿತ ನೇಮಕಾತಿ ಪ್ರಕ್ರಿಯೆಯಲ್ಲಿ ಸುಮಾರು 70,000 ಹೆಚ್ಚುವರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಎಸ್‌ಎಸ್‌ಸಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಎಸ್‌ಎಸ್‌ಸಿ ಪರೀಕ್ಷೆ ಎದುರಿಸಲು ಆಸಕ್ತ ಅಭ್ಯರ್ಥಿಗಳು ಆಗಾಗ ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಲಾಗಿದೆ – www. ssc.nic.in – ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಗಳನ್ನು ಜೂನ್ 20 ರಂದು ಬಿಡಗಡೆ ಮಾಡಲಾಗುವುದು ಎಂದು ಎಸ್‌ಎಸ್‌ಸಿ ತಿಳಿಸಿದೆ.

ದೆಹಲಿಯಲ್ಲಿರುವ ಸಿಬ್ಬಂದಿ ನೇಮಕಾತಿ ಆಯೋಗದ ಪ್ರಧಾನ ಕಛೇರಿ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ B ಮತ್ತು C ಮಟ್ಟದ ಹುದ್ದೆಗಳ ನೇಮಕಾತಿಗಾಗಿ ವಿವಿಧ ಪರೀಕ್ಷೆಗಳನ್ನು ನಡೆಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!