Friday, June 9, 2023

Latest Posts

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆಯಿಂದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ.

ಒಟ್ಟಾರೆ 3,304 ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಲಿದೆ. ಮಾರ್ಚ್ 31 ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ ಭಾಷೆಯ ಪರೀಕ್ಷೆ ನಡೆಯಲಿದೆ.

ಏ.3ಕ್ಕೆ ಗಣಿತ, ಏ.6ಕ್ಕೆ ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಏ.8ಕ್ಕೆ ಎಂಜಿನಿಯರಿಂಗ್, ಅರ್ಥಶಾಸ್ತ್ರ ಸೇರಿದಂತೆ ಇತರೆ ಪರೀಕ್ಷೆ ನಡೆಯಲಿದೆ.

ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಿದ ಪ್ರದೇಶದಲ್ಲಿ ಝೆರಾಕ್ಸ್ ಹಾಗೂ ಸೈಬರ್ ಕೆಫೆ ತೆರೆಯುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ನಾಳೆಯಿಂದ ಏ.15ರವರೆಗೂ ಪರೀಕ್ಷೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!