SSLC-2 ಫಲಿತಾಂಶ ಇಂದು ಪ್ರಕಟ, ಹೇಗೆ ನೋಡೋದು ರಿಸಲ್ಟ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್​​ಎಸ್​ಎಲ್​​ಸಿ ಪರೀಕ್ಷೆ-02 ಫಲಿತಾಂಶವನ್ನು ಇಂದು ಬೆಳಗ್ಗೆ 11:30ಕ್ಕೆ ಬಿಡುಗಡೆ ಮಾಡಲಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಕೆಎಸ್​ಆರ್​ಇಬಿಯ ಅಧಿಕೃತ ವೆಬ್​ ಸೈಟ್​​ https://karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್​ಲೋಡ್​ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್​ಇಎಬಿ ಅಧಿಕೃತ ವೆಬ್​​ಸೈಟ್​ kseab.karnataka.gov.in ಅಥವಾ karresults.nic.inಗೆ ಭೇಟಿ ನೀಡಿ.

ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಜೂನ್​ 14 ರಿಂದ 21ರವರಗೆ ಎಸ್​ಎಸ್​ಎಲ್​ಸಿ ಪರೀಕ್ಷೆ-02 ನಡೆದವು. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. 1.44 ಬಾಲಕರು, 79,148 ಬಾಲಕಿಯರು ಸೇರಿದಂತೆ 2.23 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ದಿಗಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನು ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!