ಎಸ್ಸೆಸ್ಸೆಲ್ಸಿ: ಕೊಡಗು ಜಿಲ್ಲೆಗೆ ಶೇ.86.48 ರಷ್ಟು ಫಲಿತಾಂಶ

ಹೊಸದಿಗಂತ ವರದಿ ಮಡಿಕೇರಿ:

ಕಳೆದ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲತಾಂಶ ಗುರುವಾರ ಪ್ರಕಟವಾಗಿದ್ದು, ಕೊಡಗು ಜಿಲ್ಲೆಗೆ ಶೇ.86.48ರಷ್ಟು ಫಲಿತಾಂಶ ಲಭ್ಯವಾಗಿದೆ..

ಕೊಡಗು ಜಿಲ್ಲೆಯಲ್ಲಿ 6,710 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 5,803 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 3,088 ಬಾಲಕಿಯರು ಮತ್ತು 2,715 ಬಾಲಕರು ತೇರ್ಗಡೆಯಾಗಿದ್ದಾರೆ.
ತಾಲೂಕುವಾರು ಫಲಿತಾಂಶ ಗಮನಿಸಿದಾಗ ಮಡಿಕೇರಿ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ 1937 ವಿದ್ಯಾರ್ಥಿಗಳಲ್ಲಿ 1,756ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.90.60ರಷ್ಟು ಫಲಿತಾಂಶ ಲಭ್ಯವಾಗಿದ್ದರೆ, ಸೋಮವಾರಪೇಟೆ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ 2,703 ವಿದ್ಯಾರ್ಥಿಗಳಲ್ಲಿ 2,304 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.85.24 ರಷ್ಟು ಫಲಿತಾಂಶ ಬಂದಿದೆ.
ವೀರಾಜಪೇಟೆ ತಾಲೂಕಿನಲ್ಲಿ ಪರೀಕ್ಷೆಗೆ ಹಾಜರಾದ 2,070 ವಿದ್ಯಾರ್ಥಿಗಳಲ್ಲಿ 1,743 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.84.20 ರಷ್ಟು ಫಲಿತಾಂಶ ಬಂದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!