Friday, July 1, 2022

Latest Posts

ಎಸ್.ಎಸ್.ಎಲ್.ಸಿ: ಬೆಳಗಾವಿ, ಚಿಕ್ಕೋಡಿ ಎರಡು ಶೈಕ್ಷಣಿಕ ಜಿಲ್ಲೆಯಲ್ಲಿ 415 ಕೇಂದ್ರಗಳಲ್ಲಿ 80,857 ವಿದ್ಯಾರ್ಥಿಗಳು ಪರೀಕ್ಷೆಗಳ ಎದುರಿಸಲು ಸಜ್ಜು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ವರದಿ, ಬೆಳಗಾವಿ :

ಕೊರೋನಾ ಎರಡನೇ ಅಲೆಯ ನಡುವೆಯೂ ಇಂದಿನಿಂದ ಎರಡು ದಿನಗಳ ಕಾಲ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲ್ಲಿದ್ದು, ಜಿಲ್ಲೆಯ ಬೆಳಗಾವಿ ಹಾಗೂ ಚಿಕ್ಕೋಡಿ ಎರಡು ಶೈಕ್ಷಣಿಕ ಜಿಲ್ಲೆಯಲ್ಲಿ ಪೂರ್ಣ ಸಿದ್ದತೆ ಕೈಗೊಳ್ಳಲಾಗಿದೆ‌.
ಎರಡು ಶೈಕ್ಷಣಿಕ ಜಿಲ್ಲೆಯ 415 ಪರೀಕ್ಷಾ ಕೇಂದ್ರಗಳಲ್ಲಿ 80,857 ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸಲು ಸಜ್ಜಾಗಿದ್ದಾರೆ.
ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು, ಪರೀಕ್ಷೆಗಳಿಗೆ ನಿಯೋಜಿತ ಸಿಬ್ಬಂದಿ ಹೊರತುಪಡಿಸಿ ಅನ್ಯ ವ್ಯಕ್ತಿಗಳ ಪ್ರವೇಶ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಳಗಾವಿ ಹಾಗೂ ಚಿಕ್ಕೋಡಿ ಎರಡು ಶೈಕ್ಷಣಿಕ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಪ್ರೌಢಶಾಲೆಗಳು ಸೇರಿದಂತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ವಸತಿ ಶಾಲೆಗಳ ಸುಮಾರು 80, 857 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಕೊವೀಡ್-19 ನಿಯಮ ಪಾಲನೆ ಜೊತೆಗೆ ಎಸ್.ಒ.ಪಿ ಪ್ರಕಾರ ಪರೀಕ್ಷೆಗಳು ನಡೆಯಲಿವೆ.
ಈಗಾಗಲೇ ಎರಡು ಶೈಕ್ಷಣಿಕ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಶೈಕ್ಷಣಿಕ ಇಲಾಖೆ ಹಾಗೂ ಜಿಲ್ಲಾ ಆಡಳಿತ ಕ್ರಮ ಕೈಗೊಂಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷೆ ಆರಂಭಕ್ಕೆ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಗಳಿಗೂ ಥರ್ಮಲ್ ಸ್ಕ್ಯಾನಿಂಗ್ ಮಾಡಲ್ಲಿದ್ದು, ನೆಗಡಿ, ಕೆಮ್ಮು, ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ಕೊಠಡಿಯಲ್ಲಿ 12 ಜನ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಾಯವ್ಯ ಸಾರಿಗೆ ಸಂಸ್ಥೆಯ ಬಸಗಳಲ್ಲಿ ಉಚಿತ ಪ್ರಯಾಣಿಸಲು ಅನುಮತಿ ನೀಡಲಾಗಿದೆ.
ಕೊರೋನಾ ಎರಡನೇ ಅಲೆ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲಿ ಹೆಚ್ಚಾಗುತ್ತಿರುವ ಡೆಲ್ಟಾ ವೈರಸ್ ಆತಂಕ ನಡುವೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ
ಅಧಿಕಾರಿಗಳು ಹಾಗೂ ಜನ ಪ್ರತಿ ನಿಧಿಗಳು ವಿದ್ಯಾರ್ಥಿಗಳಲ್ಲಿನ ಭಯ ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss