ಎಸ್.ಎಸ್‌.ಎಲ್.ಸಿ. ಪರೀಕ್ಷಾ ಕೇಂದ್ರದಲ್ಲಿ ನಕಲು,15 ಸಿಬ್ಬಂದಿ ಅಮಾನತು

ಹೊಸದಿಗಂತ ವರದಿ ಕಲಬುರಗಿ:

ಎಸ್.ಎಸ್‌.ಎಲ್.ಸಿ.ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯ ಸೇರಿದಂತೆ ಪರೀಕ್ಷಾ ಕೇಂದ್ರದ 15 ಸಿಬ್ಬಂದಿಯನ್ನು ಅಮಾನತು ಮಾಡಿ ಸಾವ೯ಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ್ ಬಿ ಗ್ರಾಮದ ಸಕಾ೯ರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ದಿಢೀರನೇ ಭೇಟಿ ನೀಡಿದ ಬಳಿಕ ಸಾಮೂಹಿಕ ನಕಲು ನಡೆಯುತ್ತಿರುವುದನ್ನು ಕಲಬುರಗಿ ಎಸ್ಪಿ ಇಶಾ ಪಂತ್ ಕಣ್ಣಾರೆ ಕಂಡಿದ್ದರು.

ಏಪ್ರಿಲ್ 3ರಂದು ನಡೆದ ಪರೀಕ್ಷೆಯಲ್ಲಿ ಗೊಬ್ಬುರ್ ಬಿ ಗ್ರಾಮ, ಅತನೂರ್ ಗ್ರಾಮ ಸೇರಿದಂತೆ ವಿವಿಧೆಡೆ ಸಾಮೂಹಿಕ ನಕಲು ನಡೆದಿದೆ. ನಕಲು ಮಾಡಲು ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಹಾಗೂ ಸಿಬ್ಬಂದಿ ಅವಕಾಶ ಮಾಡಿಕೊಟ್ಟಿದ್ದರು.

ಮೈಕ್ರೋ ಜೆರಾಕ್ಸ್ ಮಾಡಿಕೊಂಡು ಪುಸ್ತಕ ಹಿಡಿದು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರು.‌ ಈ ಕಾರಣಕ್ಕೆ ಮುಖ್ಯೋಪಾಧ್ಯಾಯ ಸೇರಿದಂತೆ 15 ಜನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!