ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಪೂರ್ಣ: ಶೀಘ್ರದಲ್ಲೇ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂಕ ನೀಡುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.

ಚುನಾವಣೆಗೂ ಮುನ್ನವೇ ಫಲಿತಾಂಶ ಹೊರ ಬೀಳುವ ಸಾಧ್ಯತೆಗಳು ಹೆಚ್ಚಿವೆ.

2022-2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 31 ರಿಂದ ಏಪ್ರಿಲ್ 15, 2023ರ ವರೆಗೆ ನಡೆದಿದ್ದು, ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶೀಘ್ರದಲ್ಲೇ ಫಲಿತಾಂಶ ಘೋಷಿಸಿದರೆ, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶವನ್ನು ಪಡೆಯಬಹುದು. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಸಂಖ್ಯೆ, ಹುಟ್ಟಿದ ದಿನಾಂಕ ಹಾಗೂ ಇತರ ವಿವರಗಳನ್ನು ನೀಡಬೇಕಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!