SSLC ಪರೀಕ್ಷೆ-3ರ ಫಲಿತಾಂಶ ಪ್ರಕಟ: ಇಲ್ಲಿ ರಿಸಲ್ಟ್ ಚೆಕ್ ಮಾಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಜುಲೈ 2025ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನ್ನು ಜು. 05 ರಿಂದ ಜು. 12 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ರಿಸಲ್ಟ್ ಈ ರೀತಿ ಚೆಕ್ ಮಾಡಿ

ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು https://karresults.nic.in ಮತ್ತು https://kseab.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನೀಡಿ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!