Wednesday, July 6, 2022

Latest Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ದಿನ 37 ವಿದ್ಯಾರ್ಥಿಗಳು ಗೈರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯ 178 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಮೊದಲ ದಿನದ ಪರೀಕ್ಷೆಗೆ 37 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಸೋಮವಾರ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಕುರಿತಂತೆ ಪರೀಕ್ಷೆ ನಡೆಯಿತು. ಈ ಬಾರಿ 29351 ರೆಗ್ಯುಲರ್, 694 ಖಾಸಗಿ, 2050 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು, 538 ಖಾಸಗಿ ಪುನರಾವರ್ತಿತ ಸೇರಿದಂತೆ ಒಟ್ಟು 32636 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಜಿಲ್ಲೆಯ 178 ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.
ಕೋವಿಡ್ ಪಾಸಿಟಿವ್ ಇದ್ದು, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಒಟ್ಟು 15 ಮಂದಿ ಪರೀಕ್ಷೇ ಬರೆದಿದ್ದಾರೆ. 32 ಮಂದಿ ಅನಾರೋಗ್ಯ ಕಾರಣದಿಂದಾಗಿ ವಿಶೇಷ ಕೊಠಡಿಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ಕೇರಳದಿಂದ ಪರೀಕ್ಷೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಜು.22ರಂದು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷಾ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳಿಗೆ ಡೀಸಿ ಭೇಟಿ
ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಪರೀಕ್ಷಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು ಪರೀಕ್ಷೆಯ ಸಂದರ್ಭ ಯಾವುದೇ ಸಮಸ್ಯೆಗಳು ಎದುರಾದರೂ ತಕ್ಷಣ ಮಾಹಿತಿ ನೀಡಬೇಕು. ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಪದುವಾ, ಕಪಿತಾನಿಯೋ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss