ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿನ ಭೀತಿಯ ನಡುವೆ ನಡೆಯುತ್ತಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಭ ಹಾರೈಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.