Tuesday, August 16, 2022

Latest Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಶೀಘ್ರದಲ್ಲಿ ಪ್ರಕಟ: ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ಹೊಸ ದಿಗಂತ ವರದಿ, ಮಂಗಳೂರು:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಅಂತಿಮ ವೇಳಾಪಟ್ಟಿ ನೀಡಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ದ.ಕ. ಜಿಲ್ಲಾಡಳಿತ, ಜಿ.ಪಂ. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ 2020ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಮತ್ತು ಪ್ರಮಾಣ ಪತ್ರ ವಿತರಣೆ ಹಾಗೂ ಪಬ್ಲಿಕ್ ಟಿವಿ ಹಾಗೂ ರೋಟರಿ ಜಿಲ್ಲೆ ೩೧೮೧ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲಾ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ, ಎನ್‌ಟಿಎಸ್‌ಇ ಪೂರ್ವಭಾವಿ ತಯಾರಿ ಪರೀಕ್ಷೆಯಲ್ಲಿ ಜಿಲ್ಲೆಯ ಮೂರು ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿವರ್ಷವೂ ಅವಿಭಜಿತ ದ.ಕ. ಜಿಲ್ಲೆಗಳು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸ್ಥಾನಗಿಟ್ಟಿಸಿಕೊಳ್ಳುತ್ತಿರುವುದು ಈ ಬಾರಿಯೂ ಮುಂದುವರಿಯುತ್ತದೆ ಎನ್ನುವ ವಿಶ್ವಾಸವಿದೆ. ಅವಿಭಜಿತ ದ.ಕ ಜಿಲ್ಲೆಯ ಶಿಕ್ಷಕರು ಶ್ರದ್ಧೆಯಿಂದ ಕೆಲಸ ಮಾಡುತ್ತಿರುವುದರಿಂದ ಇಂತಹ ಸಾಧನೆ ಮಾಡಲು ಸಾಧ್ಯವಾಗಿದೆ. ವಿಶೇಷವಾಗಿ ಗುಡ್ಡಕಾಡು, ಸಾರಿಗೆ ವ್ಯವಸ್ಥೆ ಇಲ್ಲದ ಕಡೆಯಲ್ಲಿ ಶಿಕ್ಷಕರು ಹೋಗಿ ಮಕ್ಕಳಿಗೆ ಪಾಠವನ್ನು ಬದ್ಧತೆಯಿಂದ ಮಾಡುತ್ತಿರುವುದು ವಿಶೇಷ ಸಾಧನೆಯೇ ಆಗಿದೆ ಎಂದರು.
ಈಗಾಗಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ೫ ವಲಯಗಳನ್ನು ನಿರ್ಮಾಣಮಾಡಿಕೊಂಡು ವಲಯವಾರು ಮಕ್ಕಳಿಗೆ ತರಬೇತಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss