ಮಾ.31ರಿಂದ SSLC ಪರೀಕ್ಷೆ: ಸಿಲಿಕಾನ್ ಸಿಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಮಾ.31ರಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದ್ದು, ಈ ಹಿನ್ನೆಲೆ ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯು ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಅನುಕೂಲ ಆಗುವಂತೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಬಗ್ಗೆ ಆದೇಶ ಹೊರಡಿಸಲಾಗಿತ್ತು. ಆದರೆ, ಬೆಂಗಳೂರಿನ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಈಗ ಬಿಎಂಟಿಸಿ ಕೂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲ ಆಗುವಂತೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!