ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ: 8.96 ಲಕ್ಷ ವಿದ್ಯಾರ್ಥಿಗಳು ಎಕ್ಸಾಂ ಬರೀತಿದ್ದಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2024-25ರ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿನಿಂದ (ಮಾರ್ಚ್​21) ಶುರುವಾಗಲಿದೆ. 2,818 ಪರೀಕ್ಷಾ ಕೇಂದ್ರದಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗೆ ರಾಜ್ಯಾದ್ಯಂತ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳು, ಹಾಲ್‌ಗಳು ಸಿಸಿಟಿವಿ ಕ್ಯಾಮರಾಗಳನ್ನು ಒಳಗೊಂಡಿವೆ. ಇದಲ್ಲದೆ ಕುಡಿಯುವ ನೀರು, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆಯನ್ನು ಮಾಡಲಾಗಿದೆ. ಇಂದು ಪ್ರಥಮ ಭಾಷೆಗಳ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!