ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಬೆಳಗ್ಗೆ 12.30ಕ್ಕೆ ಘೋಷಣೆಯಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆ ಮಾರ್ಚ್ 21 ರಿಂದ ಏಪ್ರಿಲ್ 04 ರ ವರೆಗೆ ನಡೆಸಲಾಯಿತು.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶಮೇ 02 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಆನ್​ಲೈನ್​ನಲ್ಲಿ ನೋಡುವುದು ಹೇಗೆ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

karresults.nic.in ನಲ್ಲಿ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
2025ರ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಲಿಂಕ್​ ಮೇಲೆ ಕ್ಲಿಕ್​ ಮಾಡಿ.
ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್​ ಪೇಜ್​ ತೆರೆದುಕೊಳ್ಳುತ್ತದೆ.
ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಬಳಿಕ, SSLC. Karnataka.gov.in ನಲ್ಲಿ ಆನ್​ಲೈನ್​ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!