SSLC EXAM | ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳೇ ಆಲ್ ದಿ ಬೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷಾ ಸಿದ್ಧತೆ ಜೋರಾಗಿದೆ.
ಇಂದಿನಿಂದ ಆರಂಭವಾದ ಪರೀಕ್ಷೆ ಏಪ್ರಿಲ್ 15 ರವರೆಗೂ ನಡೆಯಲಿದ್ದು, ಸುಸೂತ್ರವಾದ ಪರೀಕ್ಷೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ನಡೆಸಿದೆ.

ಈ ಬಾರಿ ಒಟ್ಟಾರೆ ಎಂಟು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. 5,833 ಸರ್ಕಾರಿ ಶಾಲೆ ವಿದ್ಯಾರ್ಥಿಗಳು, 3,605 ಅನುದಾನಿತ, 6,060 ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇಂದು ಬೆಳಗ್ಗೆ 10:30 ಕ್ಕೆ ಪರೀಕ್ಷೆ ಆರಂಭವಾಗಲಿದೆ. ಪ್ರಥಮ ಭಾಷಾ ಪರೀಕ್ಷೆ ಇಂದು ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸೈಬರ್ ಹಾಗೂ ಝೆರಾಕ್ಸ್ ಅಂಗಡಿಗಳನ್ನು ತೆರೆಯುವಂತಿಲ್ಲ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಹಾಲ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!