ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಇಂದಿನಿಂದ ಪ್ರಾರಂಭವಾಗುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಹಾರೈಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರತಿಯೊಬ್ಬರ ಜೀವನದಲ್ಲಿಯೂ ಬಹಳ ಪ್ರಮುಖ ಘಟ್ಟ. ಕೋವಿಡ್ ಕಾರಣದಿಂದ ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರಚಿಸಿಕೊಳ್ಳಬೇಕೆನ್ನುವುದು ನಮ್ಮ ಆಶಯ ಎಂದು ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!