April 8, 2026
Wednesday, April 8, 2026
spot_img

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್‌ ಹೇಳಿದ ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ -1 ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮುನ್ನವೇ ಮಾಡಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಲ್‌ ದಿ ಬೆಸ್ಟ್‌ ಹೇಳಿದ್ದಾರೆ.

ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಪರೀಕ್ಷಾ ಕೇಂದ್ರ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದು, ಮಕ್ಕಳೊಂದಿಗೆ ಮಾತನಾಡಿದ್ದಾರೆ. ಎಲ್ಲ ವ್ಯವಸ್ಥೆ ಮಾಡಿದ್ದೇವೆ, ಯಾರೂ ಭಯಪಡಬೇಡಿ. ನಿಮ್ಮ ಪ್ರಯತ್ನ ಮಾಡಿ, ಚೆನ್ನಾಗಿ ಪರೀಕ್ಷೆ ಬರೆಯಿರಿ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ ನಡೆಯಲಿದೆ. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 7,75,979 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. 62,938 ಪುನರಾವರ್ತಿತ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !