ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿರುವ ಕೊರೋನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಲಾದ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಹಿನ್ನಲೆಯಲ್ಲಿ SSLC ಮತ್ತು PUC ಪರೀಕ್ಷೆಯನ್ನು ಮೇ ತಿಂಗಳಿಗೆ ಮುಂದೂಡಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
SSLC ಮತ್ತು PUC ಪರೀಕ್ಷೆಗಳು ಮುಂದಿನ ಮೇ ತಿಂಗಳಿಗೆ ಮುಂದೂಡಲಾಗಿದ್ದು, ಮಕ್ಕಳು ಅಧ್ಯಯದಲ್ಲಿ ನಿರತರಾಗಬೇಕು ಎಂದು ತಿಳಿಸಿದರು. ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ತೆರವುಗೊಳಿಸಿದ ಬಳಿಕ ಮಕ್ಕಳಿಗೆ ಅನುಕೂಲವಾಗುವ ಹಾಗೆ ಒಂದುವಾರದ ಮುಂಚಿತವಾಗಿ ಪರೀಕ್ಷಾ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.