ಶಿಕ್ಷಣ ಮಂಡಳಿ ಹೆಸರಿನಲ್ಲಿ SSLC, PUC ನಕಲಿ ಅಂಕಪಟ್ಟಿ ಹಂಚಿಕೆ: ಮೂವರು ಆರೋಪಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

SSLC, PUC ನಕಲಿ ಅಂಕಪಟ್ಟಿ ತಯಾರಿಸಿ ಹಂಚುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಆರ್ಥಿಕ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ಪ್ರಶಾಂತ್ ಗುಂಡುಮನಿ (41), ಮೋನಿಷ್ (36) ಹಾಗೂ ರಾಜಶೇಖರ್ (41) ಬಂಧಿತ ಆರೋಪಿಗಳು. ಆರೋಪಿಗಳು ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಲ್ಲಿ ಅಂಕಪಟ್ಟಿ ನೀಡುತ್ತಿದ್ದರು ಎನ್ನಲಾಗಿದೆ.

ಬೆಂಗಳೂರಿನ ಕತ್ರಿಗುಪ್ಪೆ ರಾಮ್ ರಾವ್ ಲೇಔಟ್ ನಲ್ಲಿರುವ ಅಕಾಡೆಮಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಈ ಬಗ್ಗೆ ಅನುಮಾನಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!