SSLC ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೈಲುಗೈ, ಉಡುಪಿಗೆ ಅಗ್ರಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023-24ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, 73.40% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತನ್ನ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲು ಪತ್ರಿಕಾಗೋಷ್ಠಿ ನಡೆಸಿತು. SSLC ಪರೀಕ್ಷೆಯ ಫಲಿತಾಂಶಗಳು https://karresults.nic.in ನಲ್ಲಿಯೂ ಲಭ್ಯವಿದೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ವರದಿ ಮಾಡಿದರು.

ಈ ಬಾರಿ ಒಟ್ಟು 8,59,967 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಯಾದಗಿರಿ ಜಿಲ್ಲೆಗೆ ಕೊನೆ ಸ್ಥಾನದಲ್ಲಿದೆ.

ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರಗಳನ್ನು ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!