October 15, 2026
Thursday, October 15, 2026
spot_img

ಎಸ್‌ಎಸ್‌ಎಲ್‌ಸಿ ಫಲಿತಾಂಶ | ಈ ಬಾರಿ ಕೂಡ ದಕ್ಷಿಣ ಕನ್ನಡ ಜಿಲ್ಲೆಯೇ ಟಾಪರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಹಿಂದೆಂದೂ ಬಾರದಂತಹ ಉತ್ತಮ ಫಲಿತಾಂಶ ಪ್ರಕಟವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ದಕ್ಷಿಣ ಕನ್ನಡ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದೆ.

ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಇನ್ನು ಶೇ. 98.18 ಫಲಿತಾಂಶ ಪಡೆದು ಉಡುಪಿ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ಉತ್ತರ ಕನ್ನಡ, ನಾಲ್ಕನೇ ಸ್ಥಾನದಲ್ಲಿ ಮಂಡ್ಯ ಹಾಗೂ ಐದನೇ ಸ್ಥಾನವನ್ನು ಶಿರಸಿ ಪಡೆದುಕೊಂಡಿದೆ.

ಶೇ.85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಈ ಬಾರಿ 7,70,209 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಇದರಲ್ಲಿ 7,24,794 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಒಟ್ಟಾರೆ ಶೇ.94.10 ರಷ್ಟು ಮಕ್ಕಳು ಪಾಸ್‌ ಆಗಿರೋದು ಇದೇ ಮೊದಲು.

Must Read