April 23, 2026
Thursday, April 23, 2026
spot_img

94.10%| ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಾಖಲೆ ಬರೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಹಿಂದೆಂದೂ ಬಾರದಂತಹ ಉತ್ತಮ ಫಲಿತಾಂಶ ಪ್ರಕಟವಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇಲಾಖೆಯ ವೆಬ್‌ಸೈಟ್‌ ( https://karresults.nic.in/) ನಲ್ಲಿಯೂ ಫಲಿತಾಂಶ ಲಭ್ಯವಿದೆ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ.

ಈ ಬಾರಿ 7,70,209 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಇದರಲ್ಲಿ 7,24,794 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಒಟ್ಟಾರೆ ಶೇ.94.10 ರಷ್ಟು ಮಕ್ಕಳು ಪಾಸ್‌ ಆಗಿರೋದು ಇದೇ ಮೊದಲು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !