ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ:‌ 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಒಟ್ಟು 7,30, 881 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅವರಲ್ಲಿ 3.58.602 ಬಾಲಕರು ಪಾಸಾಗಿದ್ದಾರೆ. 3,72,279 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಸಾಧನೆ ಮಾಡಿದ್ದಾರೆ. ‌ಸರ್ಕಾರಿ ಶಾಲೆಗಳಲ್ಲಿ ಶೇ.88 ರಷ್ಟು ಫಲಿತಾಂಶ ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ 87.84 ರಷ್ಟು ಫಲಿತಾಂಶ ಬಂದಿದೆ. 40.061 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಪಡೆದು ತೇರ್ಗಡೆಯಾಗಿದ್ದಾರೆ.
8.53.436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಮೇ. 19 ರಂದು ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಕೆಲದಿನಗಳ ಹಿಂದೆ ಹೇಳಿದ್ದರು. ಅದರಂತೆ ಇಂದು ಮಧ್ಯಾಹ್ನ 12. 30 ಕ್ಕೆ ಅಧಿಕೃತ ವೆಬ್ ತಾಣಗಳಲ್ಲಿ ಫಲಿತಾಂಶ ಪ್ರಕಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!