October 18, 2026
Sunday, October 18, 2026
spot_img

ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಮೇಲೆಯೇ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲೂಕಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಆಂಬ್ಯುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದು, ಸ್ಟ್ರೆಚರ್‌ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾಳೆ.

ಚಿನ್ನನಾಗನಹಳ್ಳಿ ನಿವಾಸಿಯಾದ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ತನ್ನ ಕಾಲನ್ನು ಕಳೆದುಕೊಂಡಿದ್ದಳು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಈಗಾಗಲೇ ಒಂದು ಆಪರೇಷನ್‌ ಆಗಿದ್ದು, ಇನ್ನೂ ಎರಡು ಆಪರೇಷನ್‌ ಬಾಕಿ ಇದೆ.

ಇನ್ನೂ ಆಸ್ಪತ್ರೆಯಲ್ಲಿರುವಾಗಲೇ ನಾನು ಪರೀಕ್ಷೆ ಬರೆಯುತ್ತೀನಿ ಎಂದು ಕುಸುಮಾ ಹೇಳಿದ್ದಾರೆ. ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ ಇರುವ ಕುಸುಮ ಆಂಬ್ಯುಲೆನ್ಸ್‌ನಲ್ಲಿ ಸೇಂಟ್‌ ಜೋಸೆಫ್‌ ಶಾಲೆಗೆ ಆಗಮಿಸಿ ಪರೀಕ್ಷೆ ಬರೆದಿದ್ದಾಳೆ.

ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದಾರೆ. ಕುಸುಮಾಳ ಹಠ, ಪರಿಶ್ರಮ ಮತ್ತು ಶಿಕ್ಷಣದ ಮೇಲಿನ ಬದ್ಧತೆ ಇದೀಗ ಅನೇಕರಿಗೆ ಸ್ಪೂರ್ತಿಯಾಗಿದೆ.

ಮಲಗಿಕೊಂಡು ವಿದ್ಯಾರ್ಥಿನಿ ಪರೀಕ್ಷೆ ಬರೆದು ಇತರರಿಗೆ ಮಾದರಿಯಾಗಿದ್ದಾಳೆ.

Must Read