ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿನಿಯ ಮೇಲೆ ಹಲ್ಲೆಗೈದ ಆರೋಪದಡಿ ಖಾಸಗಿ ಶಾಲೆಯ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಗೆ ಬಿದಿರಿನ ಕೋಲಿನಿಂದ ಹೊಡೆದು ಗಾಯಗೊಳಿಸಿರುವ ಆರೋಪದಡಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ 16 ವರ್ಷದ ಮಗಳು ತನ್ನ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳತ್ತಿದ್ದಳು. ಆದರೆ ಶಾಲಾ ಶಿಕ್ಷಕಿಯೊಬ್ಬರು, ಅವಾಚ್ಯ ಪದಗಳಿಂದ ನಿಂದಿಸಿ, ತರಗತಿಗೆ ಹಾಜರಾತಿಯಿಲ್ಲವೆಂದರೆ ಫಲಿತಾಂಶಕ್ಕೆ ಗ್ಯಾರಂಟಿಯಿಲ್ಲ. ಅಂಕಪಟ್ಟಿ ನೀಡುವುದಿಲ್ಲ ಎಂದು ಬಿದಿರಿನ ಕೋಲಿನಿಂದ ಕೈಕಾಲುಗಳಿಗೆ ಹೊಡೆದಿದ್ದಾರೆ ಎಂದು ವಿದ್ಯಾರ್ಥಿನಿಯ ತಾಯಿ ದೂರು ನೀಡಿದ್ದಾರೆ.