September 30, 2026
Wednesday, September 30, 2026
spot_img

ಮಮ್ಮಿ Sorry, ಅಪ್ಪ I Love U ಎಂದು ಡೆತ್‌ನೋಟ್‌ ಬರೆದಿಟ್ಟು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮ*ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಬೀದರ್‌ನ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಡೆತ್‌ನೋಟ್‌ನಲ್ಲಿ ಅಮ್ಮ ಸಾರಿ, ಅಪ್ಪ ಐ ಲವ್‌ಯೂ, ಎಲ್ಲರೂ ಸದಾ ನಗುತ್ತಾ ಇರಿ ಎಂದು ಬರೆದಿದ್ದಾನೆ.

ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಪಿಎಸ್‌ಐ ಚಂದ್ರಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮುಂಬರುವ ಪರೀಕ್ಷೆಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಸದ್ಯ ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ಶಾಲೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Must Read