ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ನಾಳೆ (ಜೂ.30) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು.
ಹೇಗೆ ಪರಿಶೀಲಿಸುವುದು
karresults.nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್‌ಗೆ ಭೇಟಿ ನೀಡಿ.
ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ.
ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.
ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ.