Tuesday, August 16, 2022

Latest Posts

ಎಸ್.ಎಸ್.ಎಲ್.ಸಿ.- ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಲಾಗಿದ್ದು, ಆದರೆ ಪರೀಕ್ಷೆ ರದ್ದು ಪಡಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಬಗ್ಗೆ ಸುದ್ದಿಗಳು ಹರಡುತ್ತಿವೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಪೂರಕ ನಿರ್ಣಯಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss