ಮಂಗಳೂರಿನ ಸುರತ್ಕಲ್ ನಲ್ಲಿ ಚೂರಿ ಇರಿತ: ಗಾಯಾಳು ಸಾವು

ಹೊಸದಿಗಂತ ವರದಿ, ಮಂಗಳೂರು:

ನಗರದ ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ ಎಂಬಲ್ಲಿ ಶನಿವಾರ ರಾತ್ರಿ ದುಷ್ಕರ್ಮಿಗಳ ತಂಡ ವ್ಯಕ್ತಿಯೊಬ್ಬರನ್ನು‌ ಚೂರಿಯಿಂದ ಇರಿದು ಕೊಲೆಗೈದ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ.
ಕೃಷ್ಣಾಪುರ ನಾಲ್ಕನೇ ಬ್ಲಾಕ್ ನ ನೈತ್ಯಂಗಡಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಏಕಾಏಕಿಯಾಗಿ ಬಂದ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಗಂಭೀರವಾಗಿ ಇರಿದು ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಜಲೀಲ್ ರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ‌ತಿಳಿಸಿದ್ದಾರೆ.
ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅಂಗಡಿಯಲ್ಲಿದ್ದ ವೇಳೆ ಬಂದ ದುಷ್ಕರ್ಮಿಗಳು ಅವರ ಎದೆಯ ಭಾಗಕ್ಕೆ ಚೂರಿ ಇರಿದು ಪರಾರಿಯಾಗಿತ್ತು.
ಸ್ಥಳಕ್ಕೆ ಪೊಲೀಸ್ ಆಯುಕ್ತರು ಹಾಗೂ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ವಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಬೇಕು ಎಂದು ಕಮಿಷನರ್ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!