ಸಿಬ್ಬಂದಿ ಸಾಮೂಹಿಕ ರಜೆ : ಏರ್ ಇಂಡಿಯಾದ 86 ವಿಮಾನ ಹಾರಾಟ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅನಾರೋಗ್ಯ ಕಾರಣ ನೀಡಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್‌ ಇಂಡಿಯಾದ 86 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ.

ಸುಮಾರು 300 ಹಿರಿಯ ಕ್ಯಾಬಿನ್ ಸಿಬ್ಬಂದಿ ಕೊನೆಯ ಕ್ಷಣದಲ್ಲಿ ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ.

ಸಂಬಳದ ವಿಚಾರದಲ್ಲಿ ಅಸಮಾಧಾನ ಹೊಂದಿರುವ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ನೋಟಿಸ್‌ ನೀಡದೇ ಕೆಲಸಕ್ಕೆ ಗೈರಾಗಿದ್ದಾರೆ. ಅನಾರೋಗ್ಯ ಕಾರಣ ನೀಡಿ ಸಾಮೂಹಿಕವಾಗಿ ಸಿಬ್ಬಂದಿ ರಜೆ ಹಾಕಿದ್ದಾರೆ.

ಈ ಅನಿರೀಕ್ಷಿತ ಅಡಚಣೆಗಾಗಿ ನಾವು ನಮ್ಮ ಅತಿಥಿಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಈಗ ಎದುರಾಗಿರುವ ಪರಿಸ್ಥಿತಿಯು, ಇದುವರೆಗೆ ನಾವು ಒದಗಿಸಿರುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ. ಎಲ್ಲ ರೀತಿಯಲ್ಲಿ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!