Wednesday, December 6, 2023

Latest Posts

ಲೋಕಾಯುಕ್ತ ಬಲೆಗೆ ಬಿದ್ದ ಸಹಕಾರ ಸಂಘಗಳ ನೋಂದಣಿ ಇಲಾಖೆ ಸಿಬ್ಬಂದಿ

ಹೊಸದಿಗಂತ ವರದಿ, ಮಡಿಕೇರಿ:

ಸಹಕಾರ ಸಂಘಗಳ ನೋಂದಣಿ ಇಲಾಖೆಯ ಸಿಬ್ಬಂದಿಯೊಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.
ಮಡಿಕೇರಿಯ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಿಬ್ಬಂದಿ ಮಂಜುನಾಥ್ ಎಂಬವರೇ ಲೋಕಾಯುಕ್ತದ ಬಲೆಗೆ ಬಿದ್ದವರಾಗಿದ್ದಾರೆ.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಸಂಘದ ನೋಂದಣಿ ಮಾಡಲು ಮಂಜುನಾಥ್, 9 ಸಾವಿರ ರೂ.ಗಳಿಗೆ ಬೇಡಿಕೆಯಿಟ್ಟಿದ್ದರನ್ನಲಾಗಿದೆ. ಶುಕ್ರವಾರ ಸಂಘದ ಪದಾಧಿಕಾರಿಯಿಂದ 8 ಸಾವಿರ ರೂ.ಗಳನ್ನು ಪಡೆಯತ್ತಿದ್ದ ಸಂದರ್ಭ ಲೋಕಾಯುಕ್ತ ಎಸ್.ಪಿ.ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪವನ್ ಕುಮಾರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!