ಧಾರ್ಮಿಕ ಕಾರ್ಯಕ್ರಮದ ವೇಳೆ ಭಾರ ತಾಳಲಾರದೆ ವೇದಿಕೆ ಕುಸಿತ, 5 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದರು.

ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.  ಈ ಸಂದರ್ಭದಲ್ಲಿ ಮಾನಸ್ತಂಭ ಕಾಂಪ್ಲೆಕ್ಸ್‌ನಲ್ಲಿ ಪೆಂಡಾಲ್ ಹಾಕಲಾಗಿತ್ತು,  ಅದು ಕುಸಿದು ಬಿದ್ದಿತ್ತು. 50ಕ್ಕೂ ಹೆಚ್ಚು ಭಕ್ತರು ಅವಶೇಷಗಳಡಿ ಸಿಲುಕಿದ್ದಾರೆ.  ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಇತರ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!