ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ.ವಿ.ಕಾರಂತರ ಸಹೋದರ ಬಿ. ಕೃಷ್ಣ ಕಾರಂತ ವಿಧಿವಶರಾಗಿದ್ದಾರೆ.
ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ನ ನಿವೃತ್ತ ಉದ್ಯೋಗಿಯಾಗಿದ್ದ ಇವರು ಅದ್ಭುತ ಹಾಡುಗಾರರೂ ಆಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಇವರ ಹಾಡಿನ ಕ್ಯಾಸೆಟ್ ಗಳು ಬಹಳ ಜನಪ್ರಿಯವಾಗಿದ್ದವು. ರಂಗಭೂಮಿ ಉಡುಪಿಯ ಸದಸ್ಯರಾದ ಇವರು ಸಂಸ್ಥೆಯ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೆ, ಹಿನ್ನೆಲೆ ಹಾಡುಗಾರರಾಗಿ ಬಹಳಷ್ಟು ನಾಟಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಸಾಂಸ್ಕೃತಿಕ ರಂಗಕ್ಕೆ ನೀಡಿರುವ ಕೊಡುಗೆಗಾಗಿ ಇವರನ್ನು ಇತ್ತೀಚಿಗೆ ರಂಗಭೂಮಿ ಉಡುಪಿ ಸಂಸ್ಥೆಯು ಗೌರವಿಸಿ ಸನ್ಮಾನಿಸಿತ್ತು.
ರಂಗಭೂಮಿಯ ಎಲ್ಲಾ ಕಾರ್ಯಕ್ರಮಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿದ್ದ ಇವರ ಅಗಲುವಿಕೆ ಸಂಗೀತ ಹಾಗೂ ನಾಟಕ ರಂಗಕ್ಕೆ ಅಪಾರ ನಷ್ಟ ಉಂಟಾಗಿದೆ.
ಮೃತರ ಅಂತಿಮ ದರುಶನಕ್ಕೆ ಉಡುಪಿ ಕಿದಿಯೂರಿನಲ್ಲಿ ಇರುವ ಅವರ ಮನೆಯಲ್ಲಿ ಡಿ. 13ರ ಬೆಳಿಗ್ಗೆ ಸುಮಾರು 11.30 ರ ನಂತರ ಅವಕಾಶ ಮಾಡಿಕೊಡಲಾಗಿದೆ.
ಮೃತರ ಅಂತಿಮ ವಿಧಿವಿಧಾನವು ನಾಳೆ ಸಂಜೆ ಉಡುಪಿ ಇಂದ್ರಾಳಿಯ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಂಬದ ಮೂಲಗಳು ತಿಳಿಸಿವೆ.