ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿಸಲು ಪಣ: 6764 ಪ್ರಕರಣ, 142 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯವನ್ನು ಡ್ರಗ್ಸ್ (Drugs)ಮುಕ್ತ ಕರ್ನಾಟಕವನ್ನಾಗಿಸಲು ನಮ್ಮ ಸರಕಾರ ಸಂಕಲ್ಪ ತೊಟ್ಟಿದ್ದು, ಅದರಂತೆ ಡ್ರಗ್ಸ್ ಮುಕ್ತ ನಾಡನ್ನಾಗಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ 6764 ಪ್ರಕರಣಗಳನ್ನು(Drug Cases )ದಾಖಲಿಸಲಾಗಿದ್ದು, 142 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.

ಸದನದಲ್ಲಿ ಶಾಸಕ ರವಿಕುಮಾರಗೌಡ ಗಣಿಗ ಅವರ ಗಮನಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಜಿ.ಪರಮೇಶ್ವರ್ , ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಡ್ರಗ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ 6764 ಪ್ರಕರಣಗಳನ್ನು ದಾಖಲಿಸಲಾಗಿದೆ. 9645 ಕೆಜಿ ಗಾಂಜಾ ಹಾಗೂ 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಮೌಲ್ಯವೇ 142 ಕೋಟಿ ರೂ.ಗಳಾಗಿದೆ ಎಂದು ಮಾಹಿತಿ ನೀಡಿದರು.

ಡ್ರಗ್ಸ್ ವಿಷಯವನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲ ಜಿಲ್ಲೆಯ ಎಸ್ಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 102 ಜನ ವಿದೇಶಿಯರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. 245 ಜನ ವಿದೇಶಿಯರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ವಿವರಿಸಿದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!