ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಮಂತ್ರಿಮಂಡಲ ಪುನರ್‌ರಚನೆ ಮಾಡಿದ್ದು, ಉದಯನಿಧಿ ಸ್ಟಾಲಿನ್ ಸೇರಿ ಮೂವರು ಡಿಎಂಕೆ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು (ಸೆ.29) ಪ್ರಮಾಣವಚನ ಸ್ವೀಕರಿಸಿದರು.
ಅಲ್ಲದೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 15 ತಿಂಗಳು ಜೈಲುವಾಸ ಅನುಭವಿಸಿದ್ದ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ ಅವರು ಸಚಿವರಾಗಿ ಪುನಃ ಪ್ರಮಾಣವಚನ ಸ್ವೀಕರಿಸಿದರು.
ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಿದರೇ, ಅವರೊಂದಿಗೆ ಗೋವಿ ಚೆಜಿಯಾನ್ ಅವರು ಉನ್ನತ ಶಿಕ್ಷಣ ಖಾತೆ ಸಚಿವರಾಗಿ, ಎಸ್.ಎಂ ನಾಸರ್ ಅವರು ಅಲ್ಪಸಂಖ್ಯಾತರ ಸಚಿವರಾಗಿ ಹಾಗೂ ಆರ್.ರಾಜೇಂದ್ರನ್ ಪ್ರವಾಸೋದ್ಯಮ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಸೆಂಥಿಲ್ ಬಾಲಾಜಿ ಅವರು ವಿದ್ಯುತ್, ಅಬಕಾರಿ ಮತ್ತು ನಿಷೇಧ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮಂತ್ರಿಮಂಡಲಕ್ಕೆ ಮರಳಿದರು.
ಉದಯನಿಧಿ ಸ್ಟಾಲಿನ್ ಅವರು ಇದಕ್ಕೂ ಮುಂಚೆ ಸಚಿವರಾಗಿದ್ದ ಕಾರಣ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿಲ್ಲ. ಬದಲಿಗೆ ಅಧಿಕಾರ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಉದಯನಿಧಿ ಸ್ಟಾಲಿನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಉಪಮುಖ್ಯಮಂತ್ರಿ ನನಗೆ ಅದು ಸ್ಥಾನವಲ್ಲ. ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.