ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಕ್ಷೇತ್ರ ಮರುವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಬೆಂಬಲಯಾಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮಾರ್ಚ್ 22ರಂದು ನಡೆಯುವ ಸಭೆಗೆ ಬರುವಂತೆ ಪತ್ರದ ಮೂಲಕ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿದ್ದಾರೆ.
ಮಾರ್ಚ್ 22ರಂದು ತಮಿಳುನಾಡಿನಲ್ಲಿ ನಡೆಯಲಿರುವ ಸಭೆಗೆ ದಕ್ಷಿಣ ಭಾರತದ ಸುಮಾರು 7 ರಾಜ್ಯಗಳ ಸಿಎಂ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ, ಹಿಂದಿ ಹೇರಿಕೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ಕುರಿತು ಸಭೆ ನಡೆಸಲು ನಿರ್ಧರಿಸಲಾಗಿದೆ.