January21, 2026
Wednesday, January 21, 2026
spot_img

ಹರಿದ್ವಾರದ ದೇಗುಲದಲ್ಲಿ ಕಾಲ್ತುಳಿತ: ಇದು ಕೇವಲ ಅಪಘಾತವಲ್ಲ , ಸರ್ಕಾರದ ಆಡಳಿತ ವ್ಯವಸ್ಥೆಯ ವೈಫಲ್ಯ ಎಂದ ಕೇಜ್ರಿವಾಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಇದು ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಕಿಡಿಕಾರಿದ್ದಾರೆ.

ದೇವಸ್ಥಾನದ ಮೆಟ್ಟಿಲುಗಳ ಬಳಿ ವಿದ್ಯುತ್ ಪ್ರವಹಿಸುತ್ತಿದೆ ಎಂಬ ವದಂತಿ ಹಬ್ಬಿದೆ. ಇದರಿಂದ ಭಯಭೀತರಾದ ಭಕ್ತರು ಕಾಲ್ತುಳಿತಕ್ಕೆ ಕಾರಣರಾದರು ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ಸಿಂಗ್ ದೋಬಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಆದ್ರೆ ಇತ್ತ ಆಮ್‌ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಸಂತಾಪ ಸೂಚಿಸಿ, ʻಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಮಾನಸ ದೇವಿ ದೇವಾಲಯದಲ್ಲಿ ನಡೆದ ಘಟನೆಯು ನನ್ನನನ್ನು ದುಃಖಿತನನ್ನಾಗಿ ಮಾಡಿದೆ. ಕಾಲ್ತುಳಿತದಲ್ಲಿ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಆಧ್ಯಾತ್ಮಿಕ ಸ್ಥಳಗಳಲ್ಲಿ ಇಂತಹ ಭಯಾನಕ ಘಟನೆಗಳು ಸರ್ಕಾರದ ನಿರ್ವಹಣೆಯ ನಿರ್ಲಕ್ಷ್ಯವನ್ನು ತೋರಿಸುತ್ತವೆ. ಇದು ಕೇವಲ ಒಂದು ಅಪಘಾತವಲ್ಲ, ಇದು ವ್ಯವಸ್ಥೆಯ ವೈಫಲ್ಯ.ಇದಕ್ಕೆ ಹೊಣೆಗಾರರನ್ನು ಗುರುತಿಸಿ ಶಿಕ್ಷಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

Must Read