ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ವಿವಿಐಪಿ ಪಾಸ್ ರದ್ದು, ವಾಹನಗಳಿಗೆ ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದೀಗ ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ.

ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದರೆ, 60 ಭಕ್ತರು ಗಾಯಗೊಂಡಿದ್ದಾರೆ. ಸಂಪೂರ್ಣ ವಾಹನ ರಹಿತ ವಲಯವಾಗಿದ್ದು, ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ವಿವಿಐಪಿ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ. ಯಾವುದೇ ವಿಶೇಷ ಪಾಸ್ ಮೂಲಕ ವಾಹನಗಳಿಗೆ ಪ್ರವೇಶವನ್ನು ಅನುಮತಿಸಲಾಗುವುದಿಲ್ಲ. ರಸ್ತೆಗಳು ಏಕಮುಖ – ಭಕ್ತರ ಸುಗಮ ಸಂಚಾರಕ್ಕಾಗಿ ಏಕಮುಖ ರಸ್ತೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಕುಂಭ ಪ್ರದೇಶದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಮತ್ತು ಭಕ್ತರ ಸುರಕ್ಷತೆಯನ್ನು ಖಚಿತಪಡಿಸುವುದು ಈ ಬದಲಾವಣೆಗಳ ಉದ್ದೇಶವಾಗಿದೆ. ಭಕ್ತರು ಆಡಳಿತದ ಸೂಚನೆಗಳನ್ನು ಪಾಲಿಸಿ ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ರಸ್ತೆಗಳಲ್ಲಿ ನಡೆಸುತ್ತಿದ್ದರೆ, ಅವರನ್ನು ಖಾಲಿ ಪ್ರದೇಶಗಳಿಗೆ ಸ್ಥಳಾಂತರಿಸಬೇಕು ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಮೇಳಕ್ಕೆ ಭೇಟಿ ನೀಡುವ ಜನರನ್ನು ಅನಗತ್ಯವಾಗಿ ನಿಲ್ಲಿಸಬಾರದು ಎಂದು ಆದಿತ್ಯನಾಥ್ ಹೇಳಿದರು.

ಪ್ರಯಾಗರಾಜ್‌ನ ಎಲ್ಲಾ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದ್ದು, ತಮ್ಮ ಪವಿತ್ರ ಸ್ನಾನವನ್ನು ಮುಗಿಸಿ ಮನೆಗೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!