ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 15 ಜನ ಮೃತ್ಯು, 11 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 15 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. 11 ಜನರಿಗೆ ಗಾಯಗೊಂಡಿದ್ದು, ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್​ರಾಜ್​ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ. ಪ್ಲಾಟ್​ಫಾರ್ಮ್​ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್​​​ರಾಜ್​ಗೆ ಹೊರಡುವ​ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿದೆ.

ವಿಚಾರ ತಿಳಿದು ಸ್ಥಳಕ್ಕೆ ಎನ್​ಡಿಆರ್​ಎಫ್​ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್​ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್​ಡಿಆರ್​ಎಫ್​ ಮಾಹಿತಿ ನೀಡಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!