ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಆಂಧ್ರ ಸಿಎಂ ಕಚೇರಿ ನೀಡಿದ ಹೇಳಿಕೆಯ ಪ್ರಕಾರ, ಏಕಾದಶಿ ಆಚರಣೆಗಾಗಿ ದೇವಾಲಯದಲ್ಲಿ ದೊಡ್ಡ ಜನಸಮೂಹ ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ. ಹಲವು ಭಕ್ತರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ತುರ್ತಾಗಿ ಪ್ರತಿಕ್ರಿಯಿಸಿರುವ ಆಂಧ್ರ ಸಿಎಂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, “ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗಾದ ವೆಂಕಟೇಶ್ವರ ದೇವಾಲಯದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟುಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಪ್ರಾಣಹಾನಿಯಾಗಿರುವುದು ಆಘಾತಕಾರಿಯಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿದ್ದೇನೆ ಎಂದಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING |ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ: ಒಂಬತ್ತು ಭಕ್ತರ ದುರ್ಮರಣ

