ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸಂಬಂಧಿಸಿದ ಇತರ ಮೂವರಿಗೆ ಉಚ್ಚನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಅರ್ಜಿದಾರರು ತಮ್ಮ ಪಾಸ್‌ಪೋರ್ಟ್‌ನ್ನು ಒಪ್ಪಿಸುವಂತೆ ಷರತ್ತು ವಿಧಿಸಿದೆ.