ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11ಮಂದಿ ಸಾವಿಗೀಡಾಗಿರುವ ಘಟನೆ ಕನ್ನಡಿಗರು ಮರೆಯುವಂಥದ್ದಲ್ಲ!
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಖಜಾಂಚಿ ಜೈರಾಮ್ ಸಹ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಅಧ್ಯಕ್ಷರಿಗೆ ಇಬ್ಬರೂ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿರುವುದು ತಿಳಿದು ಬಂದಿದೆ.
ಘಟನೆ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡಳಿತ ಮಂಡಳಿಯ ನಾಲ್ವರು ಅಧಿಕಾರಿಗಳನ್ನು ಶುಕ್ರವಾರ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸಂಸ್ಥೆಯು ಹೈಕೋರ್ಟಿಗೆ ರಿಟ್ ಅರ್ಜಿಯನ್ನು ಸಲ್ಲಿಸಿತ್ತು. ಸರ್ಕಾರದ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿತ್ತು.