ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಯಾವುದರಲ್ಲೂ ಖಚಿತತೆ ಇಲ್ಲ, ಇದಕ್ಕಾಗಿಯೇ 3 ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ ಎಂದು ಕಿಡಿಕಾರಿದ್ದಾರೆ.