Thursday, March 30, 2023

Latest Posts

ಶಾಸಕರ ಮಗನ ಹುಟ್ಟುಹಬ್ಬಕ್ಕೆ ಕುಕ್ಕರ್ ಹಂಚಿಕೆ ವೇಳೆ ಕಾಲ್ತುಳಿತ: ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ವರದಿ,ಬೀದರ್:

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗುವುದು ಇನ್ನೂ ಬಾಕಿ ಇದೆ, ಜಿಲ್ಲೆಯ ಹುಮನಾಬಾದ್ ಕ್ಷೇತ್ರದ ಶಾಸಕ ರಾಜಶೇಖರ ಪಾಟೀಲ್ ಕಳೆದ ಮೂರು ಚುನಾವಣೆಯಲ್ಲಿ ಸತತವಾಗಿ ಗೆದ್ದಿರುವ ಇವರ ಚುನಾವಣೆಗೆ ತಯಾರಿ ಭರದಿಂದ ಸಾಗಿದೆ.

ಹುಮನಾಬಾದ್ ಪಟ್ಟಣದ ಹೊರವಲಯದ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಮಗನ ಹುಟ್ಟುಹಬ್ಬದ ನೆಪದಲ್ಲಿ ಮಾತೃ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರಿಗೆ ಕುಕ್ಕರ್ ಕೊಡುವ ಸುದ್ದಿ ಕೇಳಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು.

ಮಹಿಳೆಯರಿಗೆ ಕೊಡಲು ತಂದಿದ್ದ ಕುಕ್ಕರ್ ಸಂಖ್ಯೆ ಕಮ್ಮಿಯಾಗಿದ್ದರಿಂದ ನೂಕುನುಗ್ಗಲು ಉಂಟಾಯಿತು ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಶಾಸಕ ರಾಜಶೇಖರ ಪಾಟೀಲ್ ಶಾಂತತೆ ಕಾಪಾಡಲು ಹೆಣಗಾಡುತ್ತಿರುವ ಕೂಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!