ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ ವೇಳೆ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲು ಆಗದೆ ಒಬ್ಬ ಭಕ್ತ ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತ ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ಒಬ್ಬ ಭಕ್ತ ಉಸಿರಾಡಲು ಆಗದೆ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ಒಬ್ಬರಿಗೊಬ್ಬರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.
ಈ ಕುರಿತು ಮಾಹಿತಿ ನೀಡಿದ ಸೇಂಟ್ ಜಾನ್ ಆಂಬುಲೆನ್ಸ್ ಸೇವೆಗಳ ವಿಭಾಗದ ಅಸಿಸ್ಟಂಟ್ ಕಮಾಂಡಂಟ್ ಸುಶಾಂತ್ ಕುಮಾರ್ ಪಟ್ನಾಯಕ್, ಒಬ್ಬ ವ್ಯಕ್ತಿ ಮೃತಪಟ್ಟಿರುವುದು ಹೃದಯಾಘಾತದಿಂದ ಅಲ್ಲ. ನೂಕುನುಗ್ಗಲು ಉಂಟಾದ ಕಾರಣ ಉಸಿರಾಡಲು ಆಗದೆ, ಉಸಿರುಗಟ್ಟಿ ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.
ಕಾಲ್ತುಳಿತದ ಬಳಿಕ 300 ಜನರನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಸ್‌ಚಾರ್ಜ್ ಮಾಡಲಾಗಿದೆ. ಯಾರಿಗೂ ಗಂಭೀರವಾಗಿ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂಬುದಾಗಿ ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.