ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನೈಜ್ಯ ಹೋರಾಟಗಾರರ ಸಂಘ ಈ ದೂರು ದಾಖಲಿಸಿದ್ದು, ಈ ನೂಕು ನುಗ್ಗಲಿಗೆ ವಿರಾಟ್ ಕೊಹ್ಲಿ ಕೂಡಾ ಸಹ ಕಾರಣ, ದುರಂತ ನಡೆದ ಕುಟುಂಬವನ್ನು ಕೊಹ್ಲಿ ಇದುವರೆಗೆ ಭೇಟಿ ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದೆ. ಇದಲ್ಲದೆ ಈ ಹಿಂದೆ ಚಿತ್ರ ನಟ ಅಲ್ಲು ಅರ್ಜುನ್ ಸಿನಿಮಾ ಬಿಡುಗಡೆ ಸಂದರ್ಭ ನಡೆದ ದುರಂತದಲ್ಲಿ ನಟ ಕಾರಣ ಎಂದು ಅವರನ್ನು ಬಂಧಿಸಲಾಗಿತ್ತು. ಈಗ ಕೊಹ್ಲಿ ನೋಡಲು ಇಷ್ಟೊಂದು ಜನ ಪ್ರಮುಖವಾಗಿ ಸೇರಿದ್ದರು. ಹೀಗಾಗಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!