ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾಲ್ತುಳಿತದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತಾತ್ಮಕ ಸ್ಥಿರತೆಯ ಬಗ್ಗೆ ಬಿಸಿಸಿಐ ಕಳವಳ ಹೊಂದಿದೆ. ಇದೇ ಕಾರಣದಿಂದಾಗಿ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ.
ಯಾವುದೇ ನಿರ್ದಿಷ್ಟ ಕಾರಣ ನೀಡದೇ ಭಾರತೀಯ ಕ್ರಿಕೆಟ್ ಮಂಡಳಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಈ ಪ್ರಕಟಣೆಯಲ್ಲಿ ಬೆಂಗಳೂರಿನ ಪಂದ್ಯಗಳನ್ನು ರಾಜ್‌ಕೋಟ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಇತ್ತ ಯಾವುದೇ ಕಾರಣಗಳನ್ನು ಪ್ರಸ್ತಾಪಿಸದೇ ಇದ್ದರೂ, ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ಅದರಂತೆ ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಬೆಂಗಳೂರಿನ ಬದಲು ರಾಜ್‌ಕೋಟ್‌ನಲ್ಲಿ ಆಯೋಜಿಸಲಾಗುತ್ತಿದೆ.